ಮದ್ದೂರುನಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಿಎಂ

28-7-25, ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಿದ್ದರಾಮಯ್ಯ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಎಂದು ಸವಾಲು
ಹಾಕಿದರೆ.

ಮತ್ತು ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ರೂ. ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರ್ಸಿದ್ದೇವೆ ಎಂದರು.

ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು.‌ ಹಾಲು ಉತ್ಪಾದಕರ ಸಂಘದ ಮನವಿಗೆ ಸ್ಪಂದಿಸಿ ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ. ಸಹಾಯಧನ‌ ಒದಗಿಸಿದ್ದು ನಾವು. ಈಗ ಮತ್ತೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 10 ಕೋಟಿ ರೂ. ಕೊಟ್ಟಿರುವುದು ನಮ್ಮ ಸರ್ಕಾರ. ಮಂಡ್ಯ ಕೃಷಿ ವಿಶ್ವವಿದ್ಯಾಲಯ ಆರಂಭಿಸಿ, ಅಗತ್ಯ ಅನುದಾನ‌ ಕೊಟ್ಟಿರುವುದು ಎಂದರು.

ನಾವು ಜಾರಿ ಮಾಡಿದ ಐದು ಗ್ಯಾರಂಟಿಗಳಿಂದಾಗಿ ರಾಜ್ಯದ ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಶಕ್ತಿ ಬಂದಿದೆ. ಪರಿಣಾಮ ಇಡೀ ದೇಶದಲ್ಲಿ ರಾಜ್ಯದ ತಲಾ ಆದಾಯ ನಂಬರ್ ಒನ್ ಆಗಿದೆ.

ಮಂಡ್ಯ ನಗರದಲ್ಲಿ 100 ಅಡಿ ರಸ್ತೆ ಮಾಡಲು ಶಾಸಕ ಉದಯ್ ಅವರ ಬೇಡಿಕೆಗೆ ನಮ್ಮ ಸರ್ಕಾರ ಒಪ್ಪಿಗೆ ಸೂಚಿಸಿದೆ. ಶಾಸಕ‌ ಉದಯ್ ಅವರದ್ದು ಕಡಿಮೆ ಮಾತು, ಹೆಚ್ಚು ಕೆಲಸ ಮಾಡುತ್ತಾರೆ.

ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ. ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಅಗತ್ಯ ಗೊಬ್ಬರ ಸರಬರಾಜು ಮಾಡುವಂತೆ ಒತ್ತಾಯಿಸಿ ಒಂದು ವಾರ ಕಳೆದರೂ ಇದುವರೆಗೂ ಕೊಟ್ಟಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ಜೊತೆ ಮಾತನಾಡಿ ಗೊಬ್ಬರ ಕೊಡಿಸಬೇಕು ಎಂದರು.

  • ಇಂದು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು
  • Related Posts

    ನಟ ದರ್ಶನ್ ಅವರ ಅಭಿಮಾನಿಗಳಿಂದ ಹುಟ್ಟುಹಬ್ಬ ಆಚರಣೆ

    ಕೆ.ಆರ್.ಪೇಟೆ:ಕನ್ನಡ ಚಲನಚಿತ್ರ ನಟ ದರ್ಶನ್ ಹುಟ್ಟು ಹಬ್ಬದ ಪ್ರಯುಕ್ತ ಅವರ ಕೆ.ಆರ್.ಪೇಟೆ ಅಭಿಮಾನಿ ಬಳಗದ ವತಿಯಿಂದ ಪಟ್ಟಣದಲ್ಲಿರುವ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ…

    ಫೆಬ್ರವರಿ 13 ರಂದು ಕಾಪನಹಳ್ಳಿ ಶ್ರೀ ಸಿದ್ದಲಿಂಗೇಶ್ವರ ಬ್ರಹ್ಮರಥೋತ್ಸವ

    ಫೆಬ್ರವರಿ 13 ರಂದು ಕಾಪನಹಳ್ಳಿ ಶ್ರೀ ಸಿದ್ದಲಿಂಗೇಶ್ವರ ಬ್ರಹ್ಮರಥೋತ್ಸವ* ಕೆ.ಆರ್.ಪೇಟೆ ತಾಲೂಕಿನ ಕಾಪನಹಳ್ಳಿ ಸಮೀಪದ ಶ್ರದ್ಧಾ ಭಕ್ತಿ ಕೇಂದ್ರವಾಗಿರುವ ಗವಿಮಠದ ಸ್ವತಂತ್ರ ಸಿದ್ದಲಿಂಗೇಶ್ವರರ ಬ್ರಹ್ಮ ರಥೋತ್ಸವ ಹಿನ್ನಲೆಯಲ್ಲಿ ಮಠದ ಪೀಠಾಧ್ಯಕ್ಷರಾದ ಚನ್ನವೀರ ಮಹಾಸ್ವಾಮಿಗಳು ಮಠದ ಆವರಣದಲ್ಲೆ ಬ್ರಹ್ಮ ರಥೋತ್ಸವದ ಕರ ಪತ್ರಿಕೆ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!