
೨೮, ಜೂಲೈ ೨೫, ಬೆಳಗಾವಿಯ ಯಮನಾಪೂರ್ ಕೈಗಾರಿಕಾ ಪ್ರದೇಶದ ಶ್ರಮಿಕ ತಾತ್ಕಾಲಿಕ ವಸತಿ ಸಮ್ಮುಚ್ಛಯ ಪ್ಲಾಟ್ ನಂ-3 ರಲ್ಲಿ ನಡೆದ ಶ್ರಮಿಕ ತಾತ್ಕಾಲಿಕ ವಸತಿ ಸಮ್ಮುಚ್ಛಯಗಳ ಉದ್ಘಾಟನೆ ಹಾಗೂ ಬೆಳಗಾವಿ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಲಾಡ್, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಅಣ್ಣ ಜಾರಕಿಹೊಳಿ, ಶಾಸಕರಾದ ಆಸಿಫ್ ಸೇಠ್, ಬಾಬಾಸಾಹೇಬ್ ಪಾಟೀಲ, ಉಪ ಕಾರ್ಮಿಕ ಆಯುಕ್ತರಾದ ನಾಗೇಶ್ ಡಿ.ಜಿ, ಜಂಟಿ ಕಾರ್ಯದರ್ಶಿ ಉಮೇಶ್ ಎ.ಎಚ್, ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀಮತಿ ಭಾರತಿ, ವಿಜಯಕುಮಾರ್ ಪಾಟೀಲ, ಅಲಿ ಸರ್, ಮುಂಡರಗಿ ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು.









