
30 ಜೂಲೈ, 2025. ಬೆಂಗಳೂರಿನ ಡೈರಿ ಸರ್ಕಲ್ ಬಳಿಯ ಯಶೋಧರಮ್ಮ ದಾಸಪ್ಪ ರಾಜ್ಯ ಮಹಿಳಾ ನಿಲಯ ಹಾಗೂ ಸರ್ಕಾರಿ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ಮಾಡಿದರು.

ಈ ಸಂದಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ ಮಹಿಳಾ ನಿಲಯದಲ್ಲಿ 48 ಹಾಗೂ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ 90 ಬಾಲಕಿಯರು ಆಶ್ರಯ ಪಡೆಯುತ್ತಿದ್ದಾರೆ ಎಂದರು, ಹಾಗೂ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯದರು.

ಈ ವೇಳೆ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ಉಪ ನಿರ್ದೇಶಕರಾದ ಸುಮಂಗಲಾ ಮಳಾಪುರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.








