
೧೮, ಆಗಸ್ಟ್ಬೆ ೨೦೨೫, ಬೆಳಗಾವಿ ಜಿಲ್ಲೆ, ಖಾನಾಪುರ ತಾಲೂಕಿನ ಹಬ್ಬನಹಟ್ಟಿ ಗ್ರಾಮದ ಮಲಪ್ರಭಾ ನದಿ ತೀರದಲ್ಲಿರುವ ಶ್ರೀ ಸ್ವಯಂಭೂ ಮಾರುತಿ ಮಲಪ್ರಭಾ ತೀರ್ಥಕ್ಷೇತ್ರಕ್ಕೆ ಸುಮಾರು ಒಂದೂವರೆ ಕೋಟಿ (1.50 Cr) ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚನ್ನರಾಜ್ ಹಟ್ಟಿಹೊಳಿ ಚಾಲನೆ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ದೇವಸ್ಥಾನದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಹಣ ಬಿಡುಗಡೆ ಹಾಗಿದ್ದೂ, ಸಲಹೆ ಹಾಗೂ ಮಾರ್ಗದರ್ಶನದಂತೆ ಇಂದು ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮಾಡಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ವಿಠ್ಠಲರಾವ್ ಹಲಗೇಕರ್, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಲಕ್ಷ್ಮಣರಾವ್ ಕಸರ್ಲೆಕರ್, ಶೇಖರಗೌಡ ಕುರದಗಿ, ಕಿರಣ ಗಾವಡೆ, ಶ್ರೀಮತಿ ಸರಸ್ವತಿ ಭರಣಕರ್, ದೇವಸ್ಥಾನ ಸಮಿತಿಯ ಸದಸ್ಯರು, ಗ್ರಾಮದ ಪಂಚ ಕಮೀಟಿ ಉಪಸ್ಥಿತರಿದ್ದರು.






