ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು,ಮೇ27- ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ₹ 5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಆಗಮಿಸಿದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

  • ದಾವೋಸ್ ಪ್ರವಾಸ ಯಶಸ್ವಿ
  • ಅನೇಕ ಉದ್ಯಮಿಗಳ ಭೇಟಿಯಾಗಿ ಹೂಡಿಕೆ ಮಾಡಲು ಮನವರಿಕೆ
  • ಕರ್ನಾಟಕದ ಬಗ್ಗೆ ಉದ್ಯಮಿಗಳಿಗೆ ವಿಶೇಷ ಒಲವು
  • ನಿರುದ್ಯೋಗ ನಿವಾರಣೆ, ಜಿಡಿಪಿ ದರ ಏರಿಕೆ ಸಂಭವ

ಈಗಾಗಲೇ ನಿಗಧಿಯಾಗಿರುಂತೆ ನವೆಂಬರ್ 2ರಿಂದ 4ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ವಿಶ್ವದ ಮುಂಚೂಣಿಯಲ್ಲಿರುವ ಅನೇಕ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಅಂದಾಜು 5 ಲಕ್ಷ ಕೋಟಿ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು.

ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದೇವೆ ಇದೊಂದು ಯಶಸ್ವಿ ಪ್ರವಾಸ ಎಂದು ಅವರು ಬಣ್ಣಿಸಿದರು.

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇಲ್ಲಿನ ಆಹ್ಲಾದಕರ ವಾತಾವರಣ, ಉದ್ಯಮಿಗಳ ಪರವಾಗಿರುವ ಸರ್ಕಾರ, ಕೈಗಾರಿಕಾ ಸ್ನೇಹಿ ನೀತಿಗಳು, ಉದ್ಯಮಿಗಳಿಗೆ ಬೇಕಾಗಿರುವ ರಸ್ತೆಘಿ, ನೀರು, ವಿದ್ಯುತ್ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳು ರಾಜ್ಯದಲ್ಲಿ ಸಿಗುವುದರಿಂದ ಉದ್ಯಮಿಗಳು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ದೊಡ್ಡ ಮಟ್ಟದ ಬಂಡವಾಳ ಹೂಡಿಕೆಯಾದರೆ ಕೈಗಾರಿಕೆಗಳು ಹೆಚ್ಚು ಹೆಚ್ಚು ಸ್ಥಾಪನೆಯಾಗಲಿವೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆ. ಜೊತೆಗೆ ನಿರುದ್ಯೋಗವು ನಿವಾರಣೆಯಾಗಲಿದೆ ಎಂದು ನಿರಾಣಿ ಅಭಿಪ್ರಾಯಪಟ್ಟರು.

ನಾಲ್ಕು ದಿನ ನಾವು ವಿವಿಧ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದೇವೆ. ಬಂಡವಾಳ ಹೂಡಿಕೆ ಮಾಡುವಂತೆ ನಾವು ಮುಂದಿಟ್ಟ ಪ್ರಸ್ತಾವನೆಗೆ ಅನೇಕ ಉದ್ಯಮಿಗಳು ಒಪ್ಪಿಗೆ ಸೂಚಿಸಿದ್ದಾರೆ. ಅಂದಾಜು ಒಂದು ಲಕ್ಷ ಕೋಟಿ ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಗಲಿದೆ. ಬಂಡವಾಳ ಹೂಡಿಕೆಯಾಗುವುದರಿಂದ ರಾಜ್ಯದ ಜಿಡಿಪಿ ದರವು ಏರಿಕೆಯಾಗಲಿದೆ ಎಂದರು.

ನವೆಂಬರ್ ನಲ್ಲಿ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಖ್ಯಾತ ಉದ್ಯಮಿಗಳು ಆಗಮಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ. ಕರ್ನಾಟಕ ಕೈಗಾರಿಕಾ ವಲಯದಲ್ಲಿ ಸಾಧಿಸಿರುವ ಪ್ರಗತಿಯ ಚಿತ್ರಣವನ್ನು ತೆರೆದಿಟ್ಟಿದ್ದೇವೆ. ಬಹುತೇಕರು ನಮ್ಮ ರಾಜ್ಯದ ಬಗ್ಗೆ ವಿಶೇಷವಾದ ಆಸಕ್ತಿಯನ್ನು ತೋರಿದ್ದಾರೆ. ಇನ್ನು ಕೆಲವೇ ವರ್ಷಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗಿದೆ ಎಂಬು ವಿಶ್ವಾಸ ವ್ಯೆಕ್ತಪಡಿಸಿದರು.

  • Related Posts

    ಸಮಾಜವಾದಿ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ನೇತೃತ್ವದಲ್ಲಿ ಪಕ್ಷ ಸೇರ್ಪಡೆ

    ಬೆಂಗಳೂರು, 31, ಜೂಲೈ 2025, ಆನೇಕಲ್:- ಮಹಿಳೆಯರು ಸಾಮಾಜಿಕ ಶೋಷಣೆ ಯಿಂದ ಹೊರಗಡೆ ಬಂದು ತಮ್ಮ ಮೂಲಭೂತ ಹಕ್ಕುಗಳಿಗೆ ಹೋರಾಟ ಮಾಡಬೇಕು ಎಂದು ಸಮಾಜವಾದಿ ಪಾರ್ಟಿ ರಾಜ್ಯ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಹೇಳಿದರು. ಅವರು ಬೆಂಗಳೂರು ದಕ್ಷಿಣ…

    ವಿಧಾನ ಪರಿಷತ್ ಸದ್ಯಸ ಬಿ ಕೆ ಹರಿಪ್ರಸಾದ್ ಹುಟ್ಟುಹಬ್ಬ – ಶುಭ ಕೋರಿದ ಸಮಾಜವಾದಿ ನಾಯಕರು

    ಬೆಂಗಳೂರು, ಬಿ ಕೆ ಹರಿಪ್ರಸಾದ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು ತಿಳಿಸಿದ ಸಮಾಜವಾದಿ ಪಾರ್ಟಿ ರಾಜ್ಯ ಅಧ್ಯಕ್ಷ ಎನ್ ಮಂಜಪ್ಪ ಮತ್ತು ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಶುಭಾಶಯಗಳು ಕೋರಿದರು ಕಳೆದ ಸುಮಾರು ವರ್ಷಗಳು ಸಾಮಾಜಿಕ ಹೋರಾಟದಲ್ಲಿ ಜನರ ಮಧ್ಯ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!