ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಶೀಘ್ರ ತೀರ್ಮಾನ : ಸಿಎಂ ಬಸವರಾಜ ಬೊಮ್ಮಾಯಿ…

ಉಡುಪಿ, ಜೂ,1 :ಪಠ್ಯಪುಸ್ತಕ ಪರಿಷ್ಕರಣೆಯ ವರದಿ ಪರಿಶೀಲನೆಯ ನಂತರ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದುಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಇಂದು ಅವರು ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಅಂಗವಾಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದಅವರು ಪಠ್ಯಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿದಂತೆ, ಈಗಾಗಲೇ ಪಠ್ಯದಲ್ಲಿರುವ ಪಾಠಗಳನ್ನು ತೆಗೆಯುವಂತೆ ಕೆಲ ಸಾಹಿತಿಗಳು ಹೇಳುತ್ತಿರುವ ಬಗ್ಗೆ
ಪ್ರತಿಕ್ರಿಯೆ ನೀಡಿ, ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಸಮಗ್ರ ವರದಿಯನ್ನು ಕೇಳಲಾಗಿದೆ. ಸ್ವಾಮೀಜಿಗಳು ಹಾಗೂ ಇತರರ ಅಭಿಪ್ರಾಯಗಳನ್ನು ಪರಿಗಣಿಸಲಾಗುವುದು. ಈ ಎಲ್ಲ ವಿಚಾರಗಳ ಬಗ್ಗೆ ಸಮಗ್ರ ವರದಿ ಹಾಗೂ
ವಾಸ್ತವಾಂಶವನ್ನು ತಿಳಿಸುವಂತೆ ಶಿಕ್ಷಣ ಸಚಿವರಿಗೆ ಸೂಚನೆ ನೀಡಲಾಗಿದೆ.


ಈ ಬಗ್ಗೆ ವರದಿ ಪಡೆದು, ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು. ನಾಳೆ ವರದಿ ದೊರೆಯಲಿದ್ದು, ಪಠ್ಯಗಳನ್ನು ವಾಪಸ್ಸು ಪಡೆಯುತ್ತೇವೆ ಎನ್ನುವ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

ಎಸಿಬಿ ಈಗಾಗಲೇ ಬಲವರ್ಧನೆಯಾಗಿದೆ. ಲೋಕಾಯುಕ್ತ ಇದ್ದರೂ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಎಸಿಬಿ ಆ ಅಧಿಕಾರವಿದೆ ಎಂದರು. ಲವ್ ಜಿಹಾದ್ ಕರಾವಳಿ ಭಾಗದಲ್ಲಿ ಮತ್ತೊಮ್ಮೆ ಸದ್ದುಮಾಡುತ್ತಿರುವ ಬಗ್ಗೆ ಪ್ರತಿಕ್ರಯಿಸಿ, ಇದಕ್ಕಾಗಿ ಕಾನೂನು ರೂಪಿಸಲಾಗಿದ್ದು, ಯಾರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ ಎಂದ ತಿಳಿಸಿದರು.

  • Related Posts

    ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ: ಸಂಸದೆ ಶೋಭಾ ಕರಂದ್ಲಾಜೆ

    ಉಡುಪಿ, ಸೆಪ್ಟಂಬರ್ 25 : ರಾಷ್ಟçಕ್ಕೆ ಮಾದರಿಯಾಗುವ ವಿದ್ಯಾಸಂಸ್ಥೆಯನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಉಡುಪಿಯ ಪ್ರಗತಿನಗರದಲ್ಲಿ 10 ಎಕ್ರೆ ಜಾಗದಲ್ಲಿ ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡವನ್ನು ಒಂದೂವರೆ ವರ್ಷದ ಒಳಗಾಗಿ ನಿರ್ಮಾಣ ಮಾಡಲಾಗುವುದು ಎಂದು…

    ಸ್ಪರ್ಧಾತ್ಮಕ ತರಬೇತಿಯ ಲಾಭವನ್ನು ಯುವಜನರು ಪಡೆಯಿರಿ: ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್

    ಉಡುಪಿ, ಸೆಪ್ಟಂಬರ್ 25 : ಜಿಲ್ಲೆಯ ಯುವ ಜನರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ, ಉದ್ಯೋಗ ಪಡೆಯಲು ಆನ್‌ಲೈನ್ ಸ್ಪರ್ಧಾತ್ಮಕ ತರಬೇತಿಯನ್ನು ಆರಂಭಿಸಿದ್ದು, ಇದರ ಲಾಭ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕೆAದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ…

    Leave a Reply

    Your email address will not be published. Required fields are marked *

    error: Content is protected !!