ದಾವಣಗೆರೆಯ ಶಿವಯೋಗಾಶ್ರಮ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಭವಿಷ್ಯ… ರಾಜಕೀಯವಾಗಿ ಆಲೂರು ನಿಂಗರಾಜ್ ಜನನಾಯಕರಾಗಿ ಹೊರಹೊಮ್ಮುತ್ತಾರೆ.

ದಾವಣಗೆರೆ: ಜನರ ಬಯಕೆ ಇದೆ. ಜನರೂ ಸಹ ಇಷ್ಟಪಟ್ಟಿದ್ದಾರೆ. ಮುಂಬರುವ ದಿನಗಳಲ್ಲಿ ಆಲೂರು ನಿಂಗರಾಜ್ ಅವರು ಜನನಾಯಕರಾಗಿ ಹೊರಹೊಮ್ಮಲಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಅವರಿಗೆ ಒಳ್ಳೆಯದಾಗಲಿ. ಸಮಾಜ ಸೇವೆ ನಿರಂತರವಾಗಿ ಮುಂದುವರಿಸಿಕೊಂಡು ಹೋಗಲಿ ಎಂದು ದಾವಣಗೆರೆಯ ಶಿವಯೋಗಾಶ್ರಮ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಅವರು ಆಶೀರ್ವದಿಸಿದರು.

ತಾಲೂಕಿನ ಆಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಬಲ ಆಕಾಂಕ್ಷಿ ಆಲೂರು ನಿಂಗರಾಜ್ ಅವರ 50 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಿದ್ದ ಸೇವಾ ಸಾಧಕರಿಗೆ ಸನ್ಮಾನ, ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಹಾಗೂ ಸಸಿ ನೆಡುವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು‌.

ಆಲೂರು ನಿಂಗರಾಜ್ ಅವರಲ್ಲಿ ಬುದ್ಧನ ಮಾನವೀಯತೆ ಇದೆ. ಬಸವಣ್ಣನವರ ಸಮಾನತೆ ಇದೆ. ಡಾ. ಬಿ. ಆರ್. ಅಂಬೇಡ್ಕರ್ ಅವರ ವೈಚಾರಿಕತೆ ಅಡಗಿದೆ. ಸಮಾಜ, ದೇಶ ನನಗೇನು ಕೊಟ್ಟಿದೆ ಎಂಬ ಬಗ್ಗೆ ತಲೆಕೆಡಿಸಿಕೊಳ್ಳದೇ ದೇಶಕ್ಕೆ ಹಾಗೂ ಸಮಾಜಕ್ಕೆ ನಾನು ಕೊಡುಗೆ ನೀಡಬೇಕೆಂಬ ಅದಮ್ಯ ಬಯಕೆಯಿಂದ ಸಮಾಜ ಸೇವೆ ಮಾಡುತ್ತಿದ್ದಾರೆ‌. ಅವರಿಗೆ ಭವಿಷ್ಯದಲ್ಲಿ ಎಲ್ಲಾ ವಿಚಾರಗಳಲ್ಲಿ ಒಳಿತಾಗಲಿ ಎಂದು ಹಾರೈಸಿದರು.

ಮತ್ತೊಬ್ಬರಿಗೆ ಒಳಿತು ಮಾಡುವ, ಕಷ್ಟದಲ್ಲಿರುವವರ ಕಣ್ಣೀರು ಒರೆಸುವ, ಬಡವರು, ಶೋಷಿತರು, ಹಿಂದುಳಿದ ವರ್ಗಗಳ ಜನರ ಸೇವೆ ಮಾಡುವ ಕಾರ್ಯ ನಿಜಕ್ಕೂ ಅನನ್ಯವಾದದ್ದು‌. ಪ್ರತಿಯೊಬ್ಬ ಮನುಷ್ಯನು ಹುಟ್ಟಿದ ಮೇಲೆ ಸಾಯಲೇಬೇಕು‌. ಹುಟ್ಟು ಆಕಸ್ಮಿಕ, ಸಾವು ನಿಶ್ಚಿತ. ಎಲ್ಲರೂ ಬದುಕಿದ್ದಾಗ ಒಳ್ಳೆಯ ಸೇವೆ ಮಾಡಬೇಕು. ಆಗ ಮಾತ್ರ ಬದುಕಿನಲ್ಲಿ ಸಾರ್ಥಕತೆ ಬರುತ್ತದೆ. ಈ ನಿಟ್ಟಿನಲ್ಲಿ ಆಲೂರು ನಿಂಗರಾಜ್ ಅವರು ಮುಂದುವರಿಯುತ್ತಿರುವುದು ಸಂತಸದ ವಿಚಾರ ಎಂದು ತಿಳಿಸಿದರು.

ಬಸವಣ್ಣ, ಅಂಬೇಡ್ಕರ್, ಬುದ್ದ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು‌. ಅವರು ಪರೋಪಕಾರಿಯಾಗಿ ಬದುಕಿದ ಪರಿಣಾಮ ಆದರ್ಶ ಪುರುಷರಾಗಿದ್ದಾರೆ. ಅವರನ್ನು ನಾವೆಲ್ಲರೂ ಈಗಲೂ ನೆನಪು‌ ಮಾಡಿಕೊಳ್ಳುತ್ತೇವೆ ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಬಲ ಆಕಾಂಕ್ಷಿ ಆಲೂರು ನಿಂಗರಾಜ್ ಮಾತನಾಡಿ, ಗ್ರಾಮದ ಸ್ನೇಹ ಬಳಗ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ತುಂಬಾನೇ ಖುಷಿ ಕೊಟ್ಟಿದೆ. ಮುಂಬರುವ ದಿನಗಳಲ್ಲಿ ಗ್ರಾಮಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದಕ್ಕೆ ಇದು ಎಚ್ಚರಿಕೆ ಗಂಟೆಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ವಿಶೇಷ ಆಹ್ವಾನಿತರಾಗಿ ದಾವಣಗೆರೆ – ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ. ಸುರೇಶ್, ಹಾವೇರಿ ಜಿಲ್ಲಾ ಬಿಜೆಪಿ ಉಸ್ತುವಾರಿ ಎಲ್. ಎನ್. ಕಲ್ಲೇಶ್, ಮುಖ್ಯ ಅತಿಥಿಗಳಾಗಿ ಆಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗಮ್ಮ ಮಂಜುನಾಥ್, ಉಪಾಧ್ಯಕ್ಷ ಶಂಕ್ರಪ್ಪ, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲ‌ದ ಪ್ರಧಾನ ಕಾರ್ಯದರ್ಶಿ ಮಹಾಬಲೇಶ್ವರ ಹಿಂಡಸಘಟ್ಟ, ಮೆಳ್ಳೆಕಟ್ಟೆ ನಾಗರಾಜ್, ಬಸಾಪುರ ರಮೇಶ್, ಕತ್ತಲಗೆರೆ ಅನಿಲ್‌ಕುಮಾರ್, ಪತ್ರಕರ್ತರಾದ ಮಲ್ಲಿಕಾರ್ಜುನ್ ಕಬ್ಬೂರು, ಸುರೇಶ್ ಕುಣೆಬೆಳಕೆರೆ, ಮೂಗಪ್ಪ, ಕೆ. ಎಸ್. ಚನ್ನಬಸಪ್ಪ, ಆನಂದಪ್ಪ, ಸೋಮಣ್ಣ, ಕೋರಿ ಸಿದ್ಧಪ್ಪ, ಕೃಷ್ಣಪ್ಪ, ಮಾರಪ್ಪ, ಗೊಲ್ಲರ ಹನುಮಂತಪ್ಪ ಮತ್ತಿತರರು ಹಾಜರಿದ್ದರು.

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!