ದಾವಣಗೆರೆಯಲ್ಲಿ ವಿಮಾನ ನಿಲ್ದಾಣಕಾಗಿ ಪ್ರಾಧಿಕಾರದ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ, ಇನ್ನೂ 3 ವಾರಗಳಲ್ಲಿ ವರದಿ…..

ದಾವಣಗೆರೆ, ಜೂನ್ 3.
ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಶುಕ್ರವಾರ ದಾವಣಗೆರೆ ಜಿಲ್ಲೆಯ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ನಡೆಸಿದರು.

ಹಾಲುವರ್ತಿ,ಅನಗೋಡು ಮತ್ತು ಉಳುಪಿನ ಕಟ್ಟೆ ಗ್ರಾಮಗಳ ಸುತ್ತಲಿನ 359 ಎಕರೆ ಪ್ರದೇಶವನ್ನು ಸ್ಥಳ ಪರಿಶೀಲನೆ ನಡೆಸಲಾಯಿತು.

ಸುಮಾರು 52 ಸರ್ವೆ ನಂಬರುಗಳ ಭಾಗಶಃ ಪ್ರದೇಶದಲ್ಲಿ ಮಣ್ಣಿನ ನಮೂನೆ,ಹೈ ಟೆನ್ ಶನ್ ವಿದ್ಯುತ್ ಮಾರ್ಗ ಹಾದುಹೋಗಿರುವುದು,ಭೂಮಿಯ ಸಮತಟ್ಟು ಮುಂತಾದವುಗಳನ್ನು ವೀಕ್ಷಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು ಮಾತನಾಡಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿದ್ದು, ಸಾಧ್ಯಾಸಾಧ್ಯತೆಗಳ (feesibality) ವರದಿಯನ್ನು 3 ವಾರದೊಳಗಾಗಿ ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ,ಜಿ.ಪಂ.ಸಿಇಓ ಡಾ.ಚನ್ನಪ್ಪ , ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು,ಜಿ.ಪಂ.ಉಪ ಕಾರ್ಯದರ್ಶಿ ಆನಂದ್, ಡಿಡಿಎಲ್ಆರ್ ಭಾವನ ಇದ್ದರು

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!