ಸ್ಥಳೀಯ ದೇಶಿ ಮೂಲದ ಸಸಿಗಳ ಬೆಳೆಸಲು ಕ್ರಮ; ಮೇಯರ್

ದಾವಣಗೆರೆ: ಸ್ವಾತಂತ್ರ‍್ಯ ಭಾರತದ ಅಮೃತ ಮಹೋತ್ಸವದ ಅಂಗವಾಗಿ ‘ನನ್ನ ಮಣ್ಣು, ನನ್ನ ದೇಶ’ ಅಭಿಯಾನದ ಮೂಲಕ ಸ್ಥಳೀಯ ದೇಶಿಯ ಮೂಲದ ಸಸಿಗಳನ್ನು ನೆಡಲಾಯಿತು.

ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿನ ಗುಂಡಿ ಮಹದೇವಪ್ಪ ಪಾರ್ಕ್ನಲ್ಲಿ ‘ಅಮೃತ ವಾಟಿಕಾ’ ಸಸಿ ನೆಡುವ ಮೂಲಕ ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ಅಭಿವೃದ್ಧಿಪಡಿಸಲು ಕ್ರಮವಹಿಸಲಾಯಿತು.

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.೩೮ ಎಂ.ಸಿ.ಸಿ ಬಿ ಬ್ಲಾಕ್ ನ ಗುಂಡಿ ಸರ್ಕಲ್ ಪಾರ್ಕ್ ನಲ್ಲಿ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದಡಿಯಲ್ಲಿ ಐದು ವಿಶೇಷ ಗಿಡಗಳನ್ನು ನೆಡಲಾಯಿತು. ಫಿಲಿಶಿಯಂ ಡೆಸಿಪೆನ್ಸಿ, ಬೆಂಜಮಿನ್ ಫೈಕಸ್, ಬಾಟಲ್ ಬ್ರಶ್, ಲೆಜೆಸ್ಟ್ರೋಮಿಯ ತಬುಬಿಯ ರೋಸಿಯ ಜಾತಿಯ ೧೦೦ ಸಸಿಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಪಾಲಿಕೆಯ ಆಯುಕ್ತೆ ರೇಣುಕಾ, ಪಾಲಿಕೆ ಆಡಳಿತ ಪಕ್ಷದ ನಾಯಕ ಹಾಗೂ ಸದಸ್ಯ ಗಡಿಗುಡಾಳ್ ಮಂಜುನಾಥ್, ಪರಿಸರ ಜಗದೀಶ್, ಬಸವಣ್ಣ, ಅಜಯ್ ಪ್ರಕಾಶ್, ಪಾಲಿಕೆಯ ತೋಟಗಾರಿಕೆ ಸಿಬ್ಬಂದಿ ಹಾಜರಿದ್ದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!