
ದಾವಣಗೆರೆ(ಆ20) : ಅಮೇರಿಕಾದಲ್ಲಿ ದಾವಣಗೆರೆ ಮೂಲದ ಮೂವರು ನಿಗೂಢ ಸಾವಿನ ವಿಚಾರ ಬಹಿರಂಗಗೊಂಡಿದ್ದು, ಪುತ್ರ, ಪತ್ನಿಯನ್ನ ಕೊಂದು ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಹೊರ ಬಿದ್ದಿದೆ..


ಮೂವರು ಗುಂಡೇಟಿನಿಂದ ಸಾವನ್ನಪ್ಪಿರುವ ಬಗ್ಗೆ ಅಮೇರಿಕದ ಬಾಲ್ಟಿಮೋರ್ ಕೌಂಟಿ ಪೊಲೀಸರು ಪ್ರಾಥಾಮಿಕ ಹೇಳಿಕೆ ಬಿಡುಗಡೆ ಮಾಡಿದ್ದಾರೆ

ಪತಿ, ಪತ್ನಿ ಕಲಹವೇ ಘಟನೆಗೆ ಕಾರಣ ಎನ್ನಲಾಗ್ತಿದೆ, ಪುತ್ರ ಯಶ್, ಪತ್ನಿ ಪ್ರತಿಭಾ ಹತ್ಯೆ ನಡೆಸಿ ಕೊನೆಯಲ್ಲಿ ಪತಿ ಯೋಗೇಶ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ತಿಳಿದು ಬಂದಿದೆ.
ಮರಣೋತ್ತರ ಪರೀಕ್ಷೆ ಬಳಿಕ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದು.. ಆಗಸ್ಟ್ 15ರಂದು ರಾತ್ರಿ ಘಟನೆ ನಡೆದಿರಬಹುದು ಎಂದು ಊಹಿಸಲಾಗಿದ್ದೆ, ಆಗಸ್ಟ್ 18ರಂದು ಬಾಲ್ಟಿಮೋರ್ ಪೊಲೀಸರಿಂದ ಘಟನೆ ಕುರಿತು ಮಾಹಿತಿ ಹೊರಬಿದ್ದಿದೆ