

ದಾವಣಗೆರೆ (ಆ 23): ದಾವಣಗೆರೆಯಲ್ಲಿ 120 ಕೋಟಿ ವೆಚ್ಚದಲ್ಲಿ ನೂತನವಾಗಿ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುತ್ತಿದ್ದು ಡಿಸೆಂಬರ್ ಅಂತ್ಯದ ವೇಳೆ ಇದರ ಉದ್ಘಾಟನೆ ನೆರವೇರಿಸಲು ಉದ್ದೇಶಿಸಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿಯವರು ತಿಳಿಸಿದರು.

ಇಂದು ದಾವಣಗೆರೆ ನಗರದ ಪಿ.ಬಿ.ರಸ್ತೆಯಲ್ಲಿ ನಿರ್ಮಾಣಗುತ್ತಿರುವ ಬಸ್ ನಿಲ್ದಾಣ ಕಾಮಗಾರಿಯನ್ನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರೊಂದಿಗೆ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದ್ದರು.

120 ಕೋಟಿ ವೆಚ್ಚದ ಅತ್ಯಾಧುನಿಕ ಸೌಲಭ್ಯವುಳ್ಳ ಬಸ್ ನಿಲ್ದಾಣ ಇದಾಗಿದ್ದು ಆರೂವರೆ ಎಕರೆ ಜಾಗದಲ್ಲಿ ನಿರ್ಮಾಣವಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಶೇ 75 ರಷ್ಟು ಅನುದಾನ ಮತ್ತು ಕೆ.ಎಸ್.ಆರ್.ಟಿ.ಸಿ.ಯಿಂದ ಶೇ 25 ರಷ್ಟು ಅನುದಾನದಲ್ಲಿ ನಿಲ್ದಾಣ ನಿರ್ಮಾಣವಾಗುತ್ತಿದೆ. 3 ಮಾಲ್‍ಗಳು, ಹೋಟೆಲ್, ಥಿಯೇಟರ್ ಸೇರಿದಂತೆ ಪ್ರಯಾಣಿಕರಿಗೆ ಅಗತ್ಯವಿರುವ ತತ್‍ಕ್ಷಣದ ಸೌಲಭ್ಯಗಳು ಇಲ್ಲಿ ಕಲ್ಪಿಸಲಾಗುತ್ತದೆ. ಏಕಕಾಲದಲ್ಲಿ 45 ಬಸ್‍ಗಳು ಹೋಗಲು ಸ್ಥಳಾವಕಾಶ ಕಲ್ಪಿಸಲಾಗಿದೆ. ಜೊತೆಗೆ ಕಾರ್ ಪಾರ್ಕಿಂಗ್ ವ್ಯವಸ್ಥೆಯು ಇಲ್ಲಿರಲಿದೆ ಎಂದರು.
