ಕಾಂಗ್ರೆಸ್ ಸೇರ್ತಾರಾ… ಎಂ.ಪಿ ರೇಣುಕಾಚಾರ್ಯ…?

ದಾವಣಗೆರೆ, ಆ.26: ಬಿಜೆಪಿ ಮುಖಂಡರ ವಲಸೆ ಬಗ್ಗೆ ತೆರೆಮರೆಯಲ್ಲಿ ಚಟುವಟಿಕೆಗಳು ನಡೆದಿರುವ ಹೊತ್ತಿನಲ್ಲೇ ಪಕ್ಷದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಕಾಂಗ್ರೆಸ್ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಹಲವರು ಅನುಮಾನ ಉಂಟಾಗಿದೆ‌.

ಎಂ.ಪಿ.ರೇಣುಕಾಚಾರ್ಯ ಅವರು ತಮ್ಮ ಹೊನ್ನಾಳಿ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಉಭಯ ನಾಯಕರಿಗೆ ರೇಣುಕಾಚಾರ್ಯ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇವರು ಕಾಂಗ್ರೆಸ್ ಸೇರುವವರಿದ್ದಾರೆಯೇ ಎಂಬ ಪ್ರಶ್ನೆಗಳು ಸಹ ಮೂಡಿದೆ


ರೇಣುಕಾಚಾರ್ಯ, ನಾನು ಬಿಜೆಪಿಯಲ್ಲೇ ಇದ್ದೇನೆ. ನಾನು ಕಾಂಗ್ರೆಸ್ ಸೇರುವ ಬಗ್ಗೆ ಮಾತನಾಡಲು ಭೇಟಿಯಾಗಿಲ್ಲ. ನನಗೆ ಕಾಂಗ್ರೆಸ್‌ ನಿಂದ ಆಹ್ವಾನವೂ ಬಂದಿಲ್ಲ. ವರಮಹಾಲಕ್ಷ್ಮೀ ಹಬ್ಬದ ಶುಭಾಶಯ ತಿಳಿಸಿ ಹೊನ್ನಾಳಿ, ನ್ಯಾಮತಿಯನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಮನವಿ ಮಾಡಲು ಆಗಮಿಸಿದ್ದೆ.

ನಾನು ಚುನಾವಣೆಯಲ್ಲಿ ಸೋತಿದ್ದರೂ ಆ ತಾಲೂಕಿನ ಜನರು ರಾಜಕೀಯ ಭವಿಷ್ಯ ನೀಡಿದ್ದಾರೆ. ಹೀಗಾಗಿ ಬರಪೀಡಿತ ತಾಲೂಕು ಆಗಿ ಘೋಷಿಸಲು ಮನವಿ ಮಾಡಿದ್ದೇನೆ ಎಂದರು.

ಎಸ್ ಎಸ್ ಮಲ್ಲಿಕಾರ್ಜುನ್ ಭೇಟಿ: ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನ ಭೇಟಿಯಾಗಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳನ್ನ ಬರ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಶಿಫಾರಸ್ಸು ಮಾಡಲು ಮನವಿ ನೀಡಿ

ಕಂದಾಯ ಸಚಿವರ ಭೇಟಿ; ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಅವರನ್ನ ಭೇಟಿಯಾಗಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳನ್ನ ಬರ ತಾಲೂಕುಗಳ ಪಟ್ಟಿಗೆ ಸೇರಿಸಬೇಕೆಂದು ಮನವಿ ನೀಡಿದೆನು.

  • Related Posts

    ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕನಸುಬಿಜೆಪಿ ಟಿಕೇಟ್ ಪ್ರಬಲ ಆಕಾಂಕ್ಷಿ: ಕೆ.ಬಿ.ಕೊಟ್ರೇಶ್,,,

    ದಾವಣಗೆರೆ.ಸೆ.25: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಸುವ ಮೂಲಕ ಜಿಲ್ಲೆಯನ್ನು ಮಾದರಿಯಾಗಿ ಮಾಡುವ ಕನಸು ಕಟ್ಟಿರುವುದಾಗಿ ಬಿಜೆಪಿ ಟಿಕೇಟ್ ಆಕಾಂಕ್ಷಿ ಕೆ.ಬಿ.ಕೊಟ್ರೇಶ್ ಹೇಳಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರುವ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ತಾವೂ ಕೂಡ ಬಿಜೆಪಿ ಟಿಕೇಟ್‌ಗೆ…

    *ಮೋದಿ ಸರ್ಕಾರದಲ್ಲಿ ಆದಿವಾಸಿಗಳು ಮತ್ತು ದಲಿತರಿಗೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕಿದೆ: ಅಮಿತ್ ಶಾ*

    ಮಧ್ಯಪ್ರದೇಶದ ಮಂಡ್ಲಾದಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ‘ಕಾಂಗ್ರೆಸ್ ಸದಾ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣದಲ್ಲಿ ಮುಳುಗಿದ್ದು, ಸಾಮಾಜಿಕ ನ್ಯಾಯವನ್ನು ನಾಶಪಡಿಸಿದೆ’ ಎಂದರು. ಅಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್…

    Leave a Reply

    Your email address will not be published. Required fields are marked *

    error: Content is protected !!