

ದಾವಣಗೆರೆ;( ಆ.28) : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಹಾಗೂ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಆನಗೋಡು ಹೋಬಳಿಯಲ್ಲಿ ರೈತರ ಸಮ್ಮುಖದಲ್ಲಿ ಬೆಳೆಹಾನಿ ವೀಕ್ಷಣೆ ಮಾಡಿ ರೈತರಿಂದ ಅಹವಾಲು ಸ್ವೀಕರಿಸಿದರು. ಆಗಸ್ಟ್ ತಿಂಗಳಲ್ಲಿ ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು ಮೆಕ್ಕೆಜೋಳ ಸಂಪೂರ್ಣ ಬಾಡಿ ಹೋಗಿವೆ. ಈ ವೇಳೆ ರೈತರು ತಮಗಾದ ನಷ್ಟದ ಬಗ್ಗೆ ಅಹವಾಲು ತಿಳಿಸಿದರು.

ವಸತಿ ಶಾಲೆಗೆ ಭೇಟಿ; ದಾವಣಗೆರೆ ತಾಲ್ಲೂಕಿನ ವಡೇರಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಶೈಕ್ಷಣಿಕ ಚಟುವಟಿಕೆ ಮತ್ತು ಶಾಲೆಯ ಸ್ವಚ್ಛತೆ ಪರಿಶೀಲಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ; ಆನಗೋಡು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಔಷಧ ದಾಸ್ತಾನು ಕೊಠಡಿ ವೀಕ್ಷಿಸಿ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು.
