

ದಾವಣಗೆರೆ ಆಗಸ್ಟ್ 28 : ಅನ್ನಭಾಗ್ಯ ಯೋಜನೆ ಸಂಬಂಧ ಬಿಪಿಎಲ್ ಕಾರ್ಡ್ ಗಳನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದರು. ದಾವಣಗೆರೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ಕಾರ್ಡ್ ದಾರರಿಗೆ ಅಕೌಂಟ್ ಮೂಲಕ ಹಣವನ್ನು ಹಾಕಲಾಗುತ್ತಿದೆ. ಕೆಲವೊಂದು ಕಾರ್ಡ್ ಗಳ ಅಕೌಂಟ್ ನ ತೊಂದರೆ ಇದ್ದ ಹಿನ್ನಲೆ ಹಣ ಹಾಕಿಲ್ಲ.

ಪರಿಷ್ಕರಣೆ ಮಾಡಿ ನಂತರ ತೀರ್ಮಾನ ಕೈಗೊಳ್ಳುತ್ತೇವೆ. ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.ಈಗಾಗಲೇ ಶಕ್ತಿ ಯೋಜನೆ ಜಾರಿಗೆ ತಂದಿದ್ದೇವೆ.ನಾಳೆ ಮೈಸೂರಿನಲ್ಲಿ ಗೃಹ ಲಕ್ಷ್ಮೀ ಯೋಜನೆ ಚಾಲನೆ ಚಾಲನೆ ನೀಡಲಾಗುತ್ತಿದೆ. ಡಿಸೆಂಬರ್ ನಲ್ಲಿ ಯುವ ನಿಧಿ ಯೋಜನೆ ಜಾರಿಗೊಳಿಸುತ್ತೇವೆ. ಹೀಗೆ ಒಂದೊಂದು ಗ್ಯಾರೆಂಟಿ ಯೋಜನೆಯನ್ನು ಜಾರಿ ತರುತ್ತೇವೆ ಎಂದರು.