

ಮೈಸೂರು, ಆ.30 : ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಈವರೆಗೆ ಕೊಟ್ಟ ಮಾತಿನಂತೆ ಯಾವ ಸರ್ಕಾರವೂ ನಡೆದುಕೊಂಡಿಲ್ಲ ಎಂದರೆ ಅತಿಶಯೋಕ್ತಿಯಲ್ಲ. ನಮ್ಮ ಸರ್ಕಾರ ಮುಂದಿನ 5 ವರ್ಷಗಳಲ್ಲಿ ಜನರಿಗೆ ನೀಡಿರುವ ಭರವಸೆಗಳನ್ನು ನೂರಕ್ಕೆ ನೂರು ಈಡೇರಿಸುವ ವಿಶ್ವಾಸ, ಭರವಸೆ ನಮಗಿದೆ.

ನಾವು ಜನರ ಮುಂದಿಟ್ಟಿದ್ದೆವು. ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ, ನಾಲ್ಕನೇ ಗ್ಯಾರಂಟಿಯಾಗಿ ಗೃಹಲಕ್ಷ್ಮೀ ಯೋಜನೆಯನ್ನು ಇಂದು ಜಾರಿಮಾಡಲಾಗಿದೆ ಕರ್ನಾಟಕದಲ್ಲಿ 1.26 ಕೋಟಿ ಕುಟುಂಬಗಳಿವೆ. ಆ ಕುಟುಂಬಗಳ ಯಜಮಾನಿಯಾರಿಗೆ 2000 ರೂ.ಗಳನ್ನು ಅವರ ಖಾತೆಗೆ ಇಂದು ಜಮಾ ಮಾಡಲಾಗಿದೆ. ಈ ಯೋಜನೆಗೆ 1.10 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ.

01 ಜೂನ್ 11 ರಂದು ಶಕ್ತಿ ಯೋಜನೆ ಜಾರಿಯಾಗಿದ್ದು, 48,500 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ.
02 ಅನ್ನಭಾಗ್ಯ ಕಾರ್ಯಕ್ರಮವನ್ನು ಜುಲೈ 10 ರಂದು ಜಾರಿಗೆ ತಂದೆವು. ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡದೇ ಹೋದರೂ ನಾವು 170 ರೂ.ಗಳನ್ನು ಅಕ್ಕಿ ಸಿಗುವವರೆಗೂ ಪ್ರತಿ ಬಿಪಿಎಲ್, ಅಂತ್ಯೋದಯ ಕಾರ್ಡುದಾರರ ಖಾತೆಗೆ ಜಮಾ ಮಾಡಿದ್ದೇವೆ,

03. ಜುಲೈ ತಿಂಗಳಿಂದ ಗೃಹಜ್ಯೋತಿ ಕಾರ್ಯಕ್ರಮದಡಿ 200 ಯೂನಿಟ್ ವರೆಗೆ ವಿದ್ಯುತ್ ಬಳಸುವವರಿಗೆಲ್ಲಾ ಉಚಿತ ವಿದ್ಯುತ್ ಒದಗಿಸಿ ಶೂನ್ಯ ಬಿಲ್ ನೀಡುತ್ತಿದ್ದೇವೆ. ಈ ಯೋಜನೆಗೆ 1.56 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಐತಿಹಾಸಿಕ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದರು.

ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ರಾಜ್ಯಸಭಾ ಸದಸ್ಯ ಹಾಗೂ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಸಚಿವ ಡಾ: ಕೆ.ಹೆಚ್.ಮುನಿಯಪ್ಪ, ಸಚಿವರಾದ ಕೃಷ್ಣಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಚೆಲುವರಾಯಸ್ವಾಮಿ, ಕೆ.ಹೆಚ್.ಮುನಿಸ್ವಾಮಿ, ಡಾ:ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಪಿ.ನರೇಂದ್ರಸ್ವಾಮಿ, ಬೋಸರಾಜು , ಶಾಸಕರು ಉಪಸ್ಥಿತರಿದ್ದರು.
