

ದಾವಣಗೆರೆ: ಸಾಗರ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘಟನೆ ವತಿಯಿಂದ 2022-23 ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯೂಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಂಘಟನೆಯ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚು ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳು ಗೂಗಲ್ ಫಾರ್ಮ್ ಮುಖಾಂತರ ಅಥವಾ ಕೈ ಬರಹದ ಅರ್ಜಿಯೊಂದಿಗೆ ಕಟ್ಟಡ ಕಾರ್ಮಿಕರ ಕಾರ್ಡ್, ವಿದ್ಯಾರ್ಥಿಯ ಅಂಕಪಟ್ಟಿ, ವಿದ್ಯಾರ್ಥಿಯ ಭಾವಚಿತ್ರವಿರುವ ದಾಖಲೆಯೊಂದಿಗೆ ನಗರದ ಶಿವನಗರ ಮುಖ್ಯ ರಸ್ತೆಯ ಶಾದಿ ಮಹಲ್ ಮಳಿಗೆಯಲ್ಲಿರುವ ಸಂಘದ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮೊ: 70190 10510 ಮತ್ತು 6360363625 ಸಂಪರ್ಕಿಸಬಹುದಾಗಿದೆ.