ಇಂದಿನಿಂದ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿಗೆ ಅವಕಾಶ…

ಬಿಪಿಎಲ್ ಕಾರ್ಡ್ ನಲ್ಲಿ ಪುರುಷ ಮುಖ್ಯಸ್ಥರಾಗಿದ್ದರಿಂದ ಕೆಲ ಮಹಿಳೆಯರಿಗೆ ಸಂಕಷ್ಟ ಎದುರಾಗಿದೆ. ಮನೆ ಮುಖ್ಯಸ್ಥರು ಪುರುಷನಾಗಿದ್ದರಿಂದ ಮಹಿಳೆಗೆ ಗೃಹಲಕ್ಷ್ಮೀ ಯೋಜನೆ ಸಿಗುತ್ತಿಲ್ಲ. 2000 ರೂ.ಸಿಗುತ್ತಿಲ್ಲ ಎಂದು ನಿರಾಸೆಗೊಂಡ ಮಹಿಳೆಯರಿಗೆ ಸರ್ಕಾರದ ಸಿಹಿ ಸುದ್ದಿ ನೀಡಿದೆ. ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಅವಕಾಶ ಮಾಡಿಕೊಟ್ಟಿದೆ.

ಬೆಂಗಳೂರು- ಸೆ. ೦೧-೨೦೨೩ — ಹೊಸ ಪಡಿತರ ಚೀಟಿ (Ration Card) ವಿತರಣೆಗೆ ಸರ್ಕಾರ ಯಾವಾಗ ಅನುಮತಿ ಕೊಡುತ್ತದೆ ಎಂಬ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ಇನ್ನು ಈಗಾಗಲೇ ಬಿಪಿಎಲ್ ಕಾರ್ಡ್​​ಗೆ ಸಲ್ಲಿಕೆಯಾದ ಅರ್ಜಿಗಳು ವಿಲೇವಾರಿಯಾಗಿಲ್ಲ. ಇದರ ಮಧ್ಯೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪಡೆದುಕೊಳ್ಳಲು ಬಿಪಿಎಲ್​ ಕಾರ್ಡ್​ಗಾಗಿ ಜನರು ಅಲೆದಾಡುತ್ತಿದ್ದು. ಇದರ ಮಧ್ಯೆ ಬಿಪಿಎಲ್ ದಾರರಿಗೆ ಹೊಸ ಸಂಕಷ್ಟ ಎದುರಾಗಿದೆ.

ಬಿಪಿಎಲ್​ ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರಿಂದ ಮಹಿಳೆಯರಿಗೆ ಸರ್ಕಾರ ನೀಡುತ್ತಿರುವ 2000 ರೂ. ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಿದ್ದಾರೆ. ಇದೀಗ ಸರ್ಕಾರ, ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಇಂದಿನಿಂದ
ಅಂದರೆ ಸೆಪ್ಟೆಂಬರ್ 01 ಅವಕಾಶ ನೀಡಿದೆಲಾಗಿದೆ

ಇಂದಿನಿಂದ ತಿದ್ದುಪಡಿಗೆ ಅವಕಾಶ….

ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ವಯಸ್ಕ ಮಹಿಳೆ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ. ಆದ್ರೆ, ಆಹಾರ ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪುರುಷ ಮುಖ್ಯಸ್ಥ ಕಾರ್ಡ್ ದಾರರು ಇದ್ದಾರೆ. ವಯಸ್ಕ ಮಹಿಳೆ ಇದ್ದೂ ಪುರುಷ ಮುಖ್ಯಸ್ಥ ಇರುವ ಕಾರ್ಡ್ ನಿಂದ ಅರ್ಜಿ ಸಲ್ಲಿಸಲು ಬರಲ್ಲ. ಅಲ್ಲದೇ ಮನೆಯ ಮಹಿಳೆ ಇದ್ದರೂ ಗೃಹಲಕ್ಷ್ಮಿ ಎರಡು ಸಾವಿರ ದುಡ್ಡು ಸಿಗದ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಮನೆಯೊಡತಿ ಹೆಸರು ಬದಲಾವಣೆಗೆ ಸೆಪ್ಟೆಂಬರ್​ 1ರಿಂದ ಸೆ,10ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಈ ಹತ್ತು ದಿನದಲ್ಲಿ ಹೆಸರು ಬದಲಾವಣೆ ಮಾಡಿಸಿಕೊಳ್ಳಬೇಕು.

ರೇಷನ್ ಕಾರ್ಡ್​ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್​ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್, ಬೇರೆ ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ಕೊಟ್ಟಿದೆ. ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಓನ್ ಹಾಗೂ ಕರ್ನಾಟಕ ಓನ್ ಸೇರಿ ಇತರ ಕಡೆಗಳಲ್ಲಿ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.

ಆಹಾರ ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪುರುಷ ಮುಖ್ಯಸ್ಥ ಕಾರ್ಡ್ ದಾರರು ಇದ್ದಾರೆ. ಕಾರ್ಡ್​ನ ಮುಖ್ಯಸ್ಥರು ಪುರುಷಾರಾಗಿದ್ದರೆ ಅನ್ನಭಾಗ್ಯ, ಗೃಹಲಕ್ಷ್ಮಿ ಸ್ಕೀಂ ಸಿಗಲ್ಲ. ಗೃಹಲಕ್ಷ್ಮಿ ಅರ್ಜಿ ಸಲ್ಲಿಸಲು ಬಿಪಿಎಲ್, ಎಪಿಎಲ್ ಕಾರ್ಡ್ ಮನೆಯೊಡತಿಯೇ ಇರಬೇಕು. ಇಲ್ಲದಿದ್ದರೆ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಎರಡೂ ಯೋಜನೆಗೂ ಅನರ್ಹರು. ಅಲ್ಲದೇ ಕಾರ್ಡ್ ನಲ್ಲಿ 18 ವರ್ಷದ ಒಳಗಿದ್ದ ಬಾಲಕಿಯರು ಇದ್ರೆ ತೊಂದರೆ ಇಲ್ಲ. ಆದ್ರೆ ವಯಸ್ಕ ಮಹಿಳೆ ಇದ್ದೂ ಕಾರ್ಡ್ ಮುಖ್ಯಸ್ಥ ಗಂಡಸಾಗಿದ್ದರೆ ಅಂತವರಿಗೆ ಅನ್ನಭಾಗ್ಯ ಸ್ಕೀಂ ಸಿಗಲ್ಲ. ಹೀಗಾಗಿ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಅವಕಾಶ ನೀಡಲಾಗಿದೆ.

  • Related Posts

    ವಾಹನ ಚಾಲಕರಿಗೆ ರಸ್ತೆ ಸಂಚಾರ ನಿಯಮದ ಅರಿವು ಮೂಡಿಸಿ ಅಪಘಾತ ತಪ್ಪಿಸಿ : ಜಿ.ಜಗದೀಶ್

    ಬೆಂಗಳೂರು ನಗರ ಜಿಲ್ಲೆ, ಜನವರಿ 31 ಬೆಂಗಳೂರು ನಗರದಲ್ಲಿ ಅತಿ ವೇಗದ ವಾಹನ ಚಾಲನೆಯಿಂದಾಗಿ ಅಪಘಾತ ಹೆಚ್ಚಾಗುತಿರುವ ಕಾರಣ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ವಾಹನ ಚಾಲಕರಿಗೆ ಅರಿವು ಮೂಡಿಸಿ ಎಂದು ರಸ್ತೆ ಸುರಕ್ಷತಾ ಅಧಿಕಾರಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ…

    ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಸಭೆ

    ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಮಾನ್ಯ ಮುಖ್ಯಮಂತ್ರಿಗಳಾದ Siddaramaiah ರವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆ ನಡೆಸಲಾಯಿತು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು…

    Leave a Reply

    Your email address will not be published. Required fields are marked *

    error: Content is protected !!