

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೀಗ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ಮಾರ್ಚ್ 4ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳನ್ನ ಬಂದ್ ಮಾಡಿ, ಮೆಜೆಸ್ಟಿಕ್ನಿಂದ ವಿಧಾನಸೌಧದ ತನಕ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಅರ್ನಿದಿಷ್ಟ ಅಹೋರಾತ್ರಿ ಧರಣಿಗೂ ಸಿದ್ದವಾಗಿರುವುದಾಗಿ ರಾಜ್ಯಾಧ್ಯಕ್ಷ ಗೋಪಿನಾಥ್ ತಿಳಿಸಿದ್ದಾರೆ.
ಇಂದು ಪ್ರೆಸ್ ಕ್ಲಬ್ನಲ್ಲಿ ಮಾತಾನಡಿದ ಅವರು, ಕಳೆದ 2014ರಿಂದಲ್ಲೂ ಅನೇಕ ಮನವಿಯನ್ನ ಸಲ್ಲಿಸಿದ್ದರೂ, ಹೋರಾಟಗಳನ್ನ ನಡೆಸಿದ್ದರೂ ಸರ್ಕಾರ ನಿರ್ಲಕ್ಷ್ಯವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.