

ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ಇಂದು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಎನ್. ಎಸ್. ಭೋಸರಾಜು, ಡಿ. ಸುಧಾಕರ್, ರಹೀಂ ಖಾನ್, ಬೈರತಿ ಸುರೇಶ್, ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷ ಪ್ರೊ. ರಾಜೀವ್ ಗೌಡ ಸೇರಿದಂತೆ ಸರ್ಕಾರದ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
