

ಕನಕಪುರ ತಾಲೂಕಿನ ಕ್ರೀಡಾಂಗಣದಲ್ಲಿ ಇಂದು ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ.

ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿ. ಕೆ ಶಿವಕುಮಾರ್ ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಶಿಕ್ಷಕ ಮತ್ತು ವಿದ್ಯಾರ್ಥಿಗಳ ನಡುವಿನ ವಿಶ್ವಾಸನೀಯ ಸಂಬಂಧ ವ್ಯಕ್ತಿತ್ವ ವಿಕಸನಕ್ಕೆ ರಹದಾರಿಯಾಗಿದೆ. ಕೇವಲ ಅಕ್ಷರ ಕಲಿಸಿದವರು ಗುರುವಲ್ಲ. ಯಾರು ಒಳ್ಳೆಯ ಗುಣ ಮತ್ತು ನಡತೆ, ಹೊಸ ವಿಚಾರವನ್ನು ತಿಳಿಸಿಕೊಡುತ್ತಾರೋ ಅವರೆಲ್ಲರೂ ಗುರುಗಳೇ ಆಗಿರುತ್ತಾರೆ.

ಹಿಂದೆ ಗುರು ಮುಂದೆ ಗುರಿ ಇದ್ದಾಗ ಮಾತ್ರ ಯಶಸ್ಸು ನಿಶ್ಚಿತವಾಗಿದ್ದು, ಜ್ಞಾನ, ಕೌಶಲ್ಯ ಮಟ್ಟ, ಆತ್ಮವಿಶ್ವಾಸವನ್ನು ಸುಧಾರಿಸಲು ಸಹಾಯ ಮಾಡುವ ಶಿಕ್ಷಕರನ್ನು ನಾವು ಎಷ್ಟು ಸ್ಮರಿಸಿದರೂ ಸಾಲದು. ಅವರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ರಾಜ್ಯದ ಶಿಕ್ಷಣ ವ್ಯವಸ್ಥೆ ಸುಧಾರಿಸಲು ಹಾಗೂ ಶಿಕ್ಷಕರ ಏಳಿಗೆಗಾಗಿ ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ಸಿದ್ದಪಡಿಸುತ್ತಿದ್ದು, ಶೀಘ್ರವೇ ಆ ಯೋಜನೆಗಳು ಕಾರ್ಯಗತಗೊಳ್ಳಲಿವೆ ಎಂದು ತಿಳಿಸಿದೆ.

ವರದಿಗಾರರು :-
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….