ಜಿಲ್ಲಾಡಳಿತದಿಂದ ಭಗವಾನ ಶ್ರೀ ಕೃಷ್ಣ ಜಯಂತಿ ಆಚರಣೆ…

ಧಾರವಾಡ ಸೆ.06: ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಇಂದು (ಸೆ.6) ಬೆಳಿಗ್ಗೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಭಗವಾನ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಅವರು ಮಾತನಾಡಿ, ಕೃಷ್ಣನ ಸಂದೇಶಗಳು ಸಾರ್ವಕಾಲಿಕವಾಗಿದ್ದು, ಭಾರತೀಯರು ಶ್ರೀಕೃಷ್ಣನಿಗೆ ಶ್ರೇಷ್ಠವಾದ ಸ್ಥಾನವನ್ನು ನೀಡಿದ್ದಾರೆ. ಮಹಾಭಾರತ ಮತ್ತು ಭಗವದ್ ಗೀತೆಗಳಲ್ಲಿ ಕೃಷ್ಣನ ಸಂದೇಶಗಳನ್ನು ವಿವರಿಸಲಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಕೆ.ಆರ್.ದುರ್ಗಾದಾಸ್ ಅವರು ವಿಶೇಷ ಉಪನ್ಯಾಸ ನೀಡಿದರು. ಮತ್ತು ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗೊಲ್ಲ, ಯಾದವ ಸಮಾಜ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿದರು, ಆರತಿ ದೇವಶಿಖಾಮಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….

  • Related Posts

    ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ದಿಢೀರ್ ಭೇಟಿ;

    ಜಿಲ್ಲೆಯ ಪ್ರತಿ ಆರ್.ಎಸ್ ಕೆ.ದಲ್ಲಿ ರೈತರ ಬೇಡಿಕೆ ವಹಿ ಮತ್ತು ರೈತರ ಕುಂದುಕೊರತೆ ವಹಿ ನಿರ್ವಹಿಸಲು ನಿರ್ದೇಶನ ನೀಡಿದ ಡಿಸಿ. ಧಾರವಾಡ ಜ.31: ಇಂದು ಬೆಳಿಗ್ಗೆ ನಗರದ ಗಾಂಧಿ ಭವನ ಕಾಮಗಾರಿ ವೀಕ್ಷಣೆಗೆ ತರಳಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಗಾಂಧಿ…

    ಹುಬ್ಬಳ್ಳಿಯ ಹೆಸ್ಕಾಂ ಮುಖ್ಯ ಕಚೇರಿಯಲ್ಲಿ ಕಲಘಟಗಿ ಕ್ಷೇತ್ರದ ವಿದ್ಯುತ್‌ ಸಮಸ್ಯೆಗಳ ಬಗ್ಗೆ ಸಭೆ…

    Leave a Reply

    Your email address will not be published. Required fields are marked *

    error: Content is protected !!