

ರಾಜ್ಯದ ಮಾಜಿ ಮುಖ್ಯಮಂತ್ರಿ ರೈತನಾಯಕ ಬಿ.ಎಸ್.
ಯಡಿಯೂರಪ್ಪ ಅವರ 80ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಕೆ.ಆರ್.ಪೇಟೆ ತಾಲೂಕು ಬಿಜೆಪಿ ಪಕ್ಷ ಹಾಗೂ ಸಚಿವರಾದ ನಾರಾಯಣಗೌಡರ ಅಭಿಮಾನಿಗಳ ಬಳಗದ ವತಿಯಿಂದ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಫಲು ವಿತರಿಸಲಾಯಿತು..

ಕೃಷ್ಣರಾಜಪೇಟೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಲತಾಮುರಳಿ, ನಗರ ಘಟಕದ ಅಧ್ಯಕ್ಷೆ ಚಂದ್ರಕಲಾರಮೇಶ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿಅಧ್ಯಕ್ಷ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಎಸ್.ಅಂಬರೀಶ್, ಬಿಜೆಪಿ ಓಬಿಸಿ ಘಟಕದ ಅಧ್ಯಕ್ಷ ಸಾರಂಗಿನಾಗರಾಜು, ಎಸ್.ಸಿ ಮೋರ್ಚಾ ಅಧ್ಯಕ್ಷ ರವಿಶಿವಕುಮಾರ್, ಬಿಜೆಪಿ ಮುಖಂಡರಾದ ನಂಜುಂಡ, ಗಿರೀಶ್, ಪುರಸಭೆ ಸದಸ್ಯರಾದ ಶಾಮಿಯಾನತಿಮ್ಮೇಗೌಡ, ಕೆ.ಆರ್.ನೀಲಕಂಠ, ಸಚಿವ ನಾರಾಯಣಗೌಡ ಅಭಿಮಾನಿಗಳ ಬಳಗದ ಅಧ್ಯಕ್ಷ ಚಂದ್ರಮೋಹನ್, ಸಚಿವರ ಆಪ್ತಸಹಾಯಕರಾದ ಕಿಕ್ಕೇರಿಕುಮಾರ್, ಸಾರಂಗಿ ಮಂಜುನಾಥಗೌಡ ಮತ್ತಿತರರು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರವಿ ಅವರ ನೇತೃತ್ವದಲ್ಲಿ ರೋಗಿಗಳು ಹಾಗೂ ಮಹಿಳೆಯರು ಮಕ್ಕಳಿಗೆ ಹಣ್ಣುಹಂಫಲು ಮತ್ತು ಬ್ರೆಡ್ ವಿತರಿಸಿದರು..

ಧಣಿವರಿಯದ ರೈತ ನಾಯಕರಾದ ಯಡಿಯೂರಪ್ಪ ಅವರು ತಾಲ್ಲೂಕಿನ ಸುಪುತ್ರರಾಗಿ ಜನಿಸಿ ನಾಲ್ಕು ಅವಧಿಗೆ ನಾಡಿನ ಮುಖ್ಯಮಂತ್ರಿಗಳಾಗಿ ಅಧಿಕಾರ ನಡೆಸಿ ತಾಲ್ಲೂಕಿನ ಹೆಸರನ್ನು ಇತಿಹಾಸದ ಭೂಪಟದಲ್ಲಿ ದಾಖಲಾಗುವಂತೆ ಮಾಡಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕಿನ ಸಮಗ್ರವಾದ ಅಭಿವೃದ್ಧಿಗೆ 2ಸಾವಿರ ಕೋಟಿ ರೂಗಳಿಗೂ ಹೆಚ್ಚಿನ ಅನುದಾನವನ್ನು ದೊರಕಿಸಿಕೊಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ರೈತ ನಾಯಕರಾದ ಯಡಿಯೂರಪ್ಪ ಅವರಿಗೆ ತಾಯಿ ಭುವನೇಶ್ವರಿಯು ಆರೋಗ್ಯವನ್ನು ನೀಡಿ ಮತ್ತೆ ರಾಜ್ಯವನ್ನು ಮುನ್ನಡೆಸುವ ಶಕ್ತಿನೀಡಲಿ ಎಂದು ಬಿಜೆಪಿ ಕಾರ್ಯಕರ್ತರು ಪ್ರಾರ್ಥಿಸಿದರು.
