

ಕೋಲಾರ ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಪದ್ಮ ಬಸವಂತಪ್ಪ, ಉಪ ಕಾರ್ಯದರ್ಶಿ ಶ್ರೀ ಶಿವಕುಮಾರ್, ಸಹಾಯಕ ಯೋಜನಾಧಿಕಾರಿ ಶ್ರೀ ಗೋವಿಂದೇಗೌಡ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀ ಮುನಿಯಪ್ಪ ಕೋಲಾರ ತಾಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿಯ ಕುಂಬಾರಹಳ್ಳಿ ಗ್ರಾಮದಲ್ಲಿ ಸ್ವಚ್ಛತಾ ಆಂದೋಲನಕ್ಕೆ ಚಾಲನೆಯನ್ನು ನೀಡಿ, ಗ್ರಾಮದ ಶ್ರಮದಾನ ಕಾರ್ಯವನ್ನು ಕೈಗೊಂಡು ಸಮುದಾಯಕ್ಕೆ ಸ್ವಚ್ಛತೆಯ ಅರಿವನ್ನು ಮೂಡಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಎಸ್ ಬಿಎಂ ಹಾಗೂ ಜೆಜೆ ಎಂ ಸಿಬ್ಬಂದಿ, ತಾಲೂಕು ಪಂಚಾಯತಿ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….