


ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ನಿಮಿತ್ತವಾಗಿ ನಿಪ್ಪಾಣಿಯಲ್ಲಿ, ರೋಟರಿ ಕ್ಲಬ್ ವತಿಯಿಂದ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಆರೋಗ್ಯಯುತ ಮಗು ದೇಶದ ಆಸ್ತಿ. ಹೀಗಾಗಿ 5 ವರ್ಷದೊಳಗಿನ ಮಕ್ಕಳ ಆರೋಗ್ಯ ರಕ್ಷಣೆಗಾಗಿ ನೀಡುತ್ತಿರುವ ಪೋಲಿಯೋ ಲಸಿಕೆಯನ್ನು ನಿಮ್ಮ ಮಗುವಿಗೆ ಹಾಕಿಸಿ, ಆರೋಗ್ಯ ಕಾಪಾಡಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಸದಸ್ಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.