

ಗದಗ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಮತ್ತು ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನಾ ಸಭೆಯ ಪ್ರಯುಕ್ತ ಗದಗ ನಗರಕ್ಕೆ ಭೇಟಿ ನೀಡಿದ್ದೆನು. ಜಿಲ್ಲಾ ಆಡಳಿತ ಭವನದಲ್ಲಿ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯನ್ನು ಉದ್ಘಾಟನೆ ಮಾಡಲಾಯಿತು. ನಂತರ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ “Third Eye” ಕಮಾಂಡ್ & ಕಂಟ್ರೋಲ್ ಸೆಂಟರ್‌ಗೆ ಚಾಲನೆ ನೀಡಿ, ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದೆನು ಹಾಗೂ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಯನ್ನು ಪರಿಶೀಲನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ H. K. ಪಾಟೀಲ್ ರವರು, ಶಾಸಕರಾದ ಜಿ.ಎಸ್.ಪಾಟೀಲ್ ರವರು ಹಾಗೂ ಇತರೆ ಮುಖಂಡರುಗಳು ಹಾಜರಿದ್ದರು.
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….