

ದಾವಣಗೆರೆ (ಸೆ 15). ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ, ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜನ್ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಸಿದ್ದಗಂಗಾ ಸಂಸ್ಥೆಯ 3500 ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರಧ್ವಜದ ತ್ರಿವರ್ಣ ಕೇಸರಿ, ಬಿಳಿ, ಹಸಿರು ಬಣ್ಣದಲ್ಲಿ ಭಾರತದ ಭೂಪಟ ಪ್ರದರ್ಶಿಸಿ, ಸಂವಿಧಾನ ಓದುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ 13 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

.
ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ. ಕೆ ಉಪಸ್ಥಿತರಿದ್ದರು.