

ಸೆ. ೧೫-೨೦೨೩, ದಾವಣಗೆರೆ ನಗರದ ಅಶೋಕ ರಸ್ತೆಯಲ್ಲಿರುವ ಶ್ರೀ ಲಿಂಗೇಶ್ವರ ದೇವಸ್ಥಾನದ ರಥೋತ್ಸವ ಕಾರ್ಯಕ್ರಮ ಮತ್ತು ದೇವಸ್ಥಾನದಲ್ಲಿ ಪ್ರಸಾದ ವಿನಿಯೋಗವನ್ನು ಇಂದು ಬೆಳಿಗ್ಗೆ ಏರ್ಪಡಿಸಲಾಗಿತ್ತು.

ಶ್ರೀ ಲಿಂಗೇಶ್ವರ ಸ್ವಾಮಿ ರಥೋತ್ಸವ ನಗರದ ಅಶೋಕ ರಸ್ತೆ ಸೇರಿದಂತೆ ರಾಜಬೀದಿಗಳಲ್ಲಿ ಅದ್ದೂರಿಯಾಗಿ ನಡೆಸಲಾಯಿತು.

ರಥೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಐದು ಸಾವಿರ ಜನರಿಗೆ ಅನ್ನ ಸಂತರ್ಪಣೆಯನ್ಮು ಏರ್ಪಡಿಸಲಾಗಿತ್ತು. ಸಾವಿರಾರು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಗೆ ಭಕ್ತ ಸಮರ್ಪಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿಯ ಅಧ್ಯಕ್ಷ ಅಜಂಪುರ ಮಂಜಣ್ಣ, ಉಪಾಧ್ಯಕ್ಷ ಕಿರುವಾಡಿ ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಸುರೇಂದ್ರ ಇತರರು ಇದ್ದರು.