ಅಕ್ರಮ ಮರಳು ಸಂಗ್ರಹಣೆಯ ಮೇಲೆ ಪೊಲೀಸ್ ದಾಳಿ ಮರಳು ವಶ


ದಾವಣಗೆರೆಯ ಜನವರಿ 27,
ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಮತ್ತು ಅಕ್ರಮ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ ಐ.ಪಿ.ಎಸ್. ದಾವಣಗೆರೆ ಜಿಲ್ಲೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ಶ್ರೀ ವಿಜಯಕುಮಾರ್ ಎಂ ಸಂತೋಷ ರವರು & ಶ್ರೀ ಜಿ. ಮಂಜುನಾಥ ಹಾಗೂ ಮಾನ್ಯ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಬಸವರಾಜ್ ಬಿ.ಎಸ್ ರವರ ಮಾರ್ಗದರ್ಶನದಲ್ಲಿ ಹಾಗೂ ಹರಿಹರ ವೃತ್ತ ನಿರೀಕ್ಷಕರಾದ ಶ್ರೀ ಸುರೇಶ ಸಗರಿ ಮತ್ತು ಪಿ.ಎಸ್.ಐ ಶ್ರೀ ಪ್ರಭು ಡಿ ಕೆಳಗಿನಮನಿ ಮಲೇಬೆನ್ನೂರು ರವರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿರುತ್ತದೆ.

ದಿನಾಂಕ:-27-01-2025 ರಂದು ಮಧ್ಯಾಹ್ನ ಸಮಯದಲ್ಲಿ ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಇಂಗಳಗೊAದಿ ಗ್ರಾಮದ ಬಳಿಯ ತುಂಗಭದ್ರಾ ನದಿ ದಂಡೆಯಲ್ಲಿ ಯಾರೋ ಅಪರಿಚತರು ಮರಳನ್ನು ಅಕ್ರಮವಾಗಿ ಸಾಗಣಿಕೆ ಮಾಡಿ ಲಾಭ ಮಾಡಿಕೊಳ್ಳುವ ದುರುದ್ದೇಶದಿಂದ ಮರಳನ್ನು ಸಂಗ್ರಹಿಸಿಟ್ಟಿದ್ದ ಸ್ಥಳದ ಮೇಲೆ ಹರಿಹರ ವೃತ್ತ ನಿರೀಕ್ಷಕರಾದ ಶ್ರೀ ಸುರೇಶ ಸಗರಿ ರವರ ಮಾರ್ಗದರ್ಶನದಲ್ಲಿ ಮಲೇಬೆನ್ನೂರು ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ಪ್ರಭು ಡಿ ಕೆಳಗಿನಮನಿ ರವರೊಳಗೊಂಡ ತಂಡವು ದಾಳಿ ಮಾಡಿ ಅಂದಾಜು ಬೆಲೆ 90,000/- ರೂ ಬೆಲೆಯ ಸುಮಾರು 60 ಮೆಟ್ರಿಕ್ ಟನ್ ಮರಳನ್ನು ವಶ ಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಮಲೇಬೆನ್ನೂರು ಪೊಲೀಸ್ ಠಾಣೆಯ ಗುನ್ನೆ ನಂ: 19/2025 ಕಲಂ: 303 (2) ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಿಸಿರುತ್ತದೆ.
ಈ ಅಕ್ರಮ ಮರಳು ಸಂಗ್ರಹಣೆ ಮೇಲಿನ ಕಾರ್ಯಚರಣೆಯಲ್ಲಿ ಮೇಲ್ಕಂಡ ಅಧಿಕಾರಿಗಳು ಸೇರಿದಂತೆ ಪಿ.ಎಸ್.ಐ (ತನಿಖೆ) ಶ್ರೀ ಚಿದಾನಂದಪ್ಪ, ಸಿಬ್ಬಂದಿಯವರಾದ ವೆಂಕಟೇಶ್, ನಿಂಗರಾಜು, ಮಲ್ಲಿಕಾರ್ಜುನ, ನಾಗರಾಜ್ ಜೀಪ್ ಚಾಲಕರಾದ ರಾಜಪ್ಪ, ಮುರುಳಿಧರ ರವರ ತಂಡವು ಭೇದಿಸುವಲ್ಲಿ ಯಶಸ್ವಿಯಾಗಿದ್ದು ಈ ಪತ್ತೆ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ರವರು ಮೆಚ್ಚುಗೆ ವ್ಯಕ್ತ ಪಡಿಸಿರುತ್ತಾರೆೆ

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!