

ಮದುವೆಯಲ್ಲಿ ಮಾಡಿದ ಗ್ರಾಮಸ್ಥರು ಮಧ್ಯರಾತ್ರಿಯ ನಂತರ ವಾಂತಿಬೇಧಿಯಿಂದ ಅಸ್ವಸ್ಥರಾಗಿದ್ದಾರೆ. ಚಿಕಿತ್ಸೆಗಾಗಿ ಎಲ್ಲರನ್ನೂ ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ.
“ ಮಧ್ಯರಾತ್ರಿಯ ನಂತರ ಮದುವೆ ಊಟ ಸೇವಿಸಿ ಅಸ್ವಸ್ಥರಾದ 20 ಜನರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. 20 ಜನರ ಪೈಕಿ 12 ಜನರು ರಾತ್ರಿಯೇ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗಿದ್ದರು. ಉಳದಿ 8 ಜನರು ಸೋಮವಾರ ಸಂಜೆ ಗುಣಮುಖರಾಗಿ ತೆರಳಿದಿದ್ದಾರೆ. ಯಾವುದೇ ಸಮಸ್ಯೆ ಇಲ್ಲ’ ಎಂದು ಸಾರ್ವಜನಿಕ ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಡಾ. ನೀರಜ್ “ಮಾಹಿತಿ ನೀಡಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಾಗರಾಜ್ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಜಗಳೂರು ತಾಲ್ಲೂಕಿನ ಕಲ್ಲೇದೇವರಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ಮದುವೆ ಊಟ ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದು, ಇಲ್ಲಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.