

ಚನ್ನಗಿರಿ: ಸಾವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಡುತ್ತಿದ್ದ 7 ಜನ ಜೂಜುಕೋರನ ಪೊಲೀಸರು ಬಂಧಿಸಿದ ಘಟನೆ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ನಡೆದಿದೆ.
ಸಂತೇಬೆನ್ನೂರು ಗ್ರಾಮದ ಅಂಬೇಡ್ಕರ್ ಸಮುದಾಯ ಭವನದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಶಿವರುದ್ರಪ್ಪ ಮೇಟಿ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿದೆ.
ದಾಳಿಯಲ್ಲಿ 7ಜನ ಆರೋಪಿಗಳನ್ನು ಬಂಧನ ಮಾಡಿದ್ದು ಬಂಧಿತರಿಂದ 4,150 ರೂ. ಮತ್ತು ಇಸ್ಪೀಟ್ ಆಟಕ್ಕೆ ಬಳಸಿದ್ದ ಒಂದು ಪ್ಲಾಸ್ಟಿಕ್ ಪಾಟ್ ಹಾಗೂ 52 ಎಲೆಗಳನ್ನು ವಶ ಪಡಿಸಿಕೊಂಡಿದ್ದಾರೆ.
ಈ ಸಂಬಂಧ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.