

ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ-ಕಾಲೇಜುಗಳಲ್ಲಿ ಯೋಗ ಶಿಕ್ಷಣ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಎಸ್-ವ್ಯಾಸ ಯೋಗ ವಿಶ್ವವಿದ್ಯಾಲಯದಲ್ಲಿ ಇದೇ ಭಾನುವಾರ ನಡೆದ 24 ನೇ ಅಂತಾರಾಷ್ಟ್ರೀಯ ಯೋಗ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಈ ವಿಷಯ ಪ್ರಕಟಿಸಿದ್ದಾರೆ.
ವಿದ್ಯಾರ್ಥಿ ದೆಸೆಯಿಂದ ಒತ್ತಡ ಪರಿಸ್ಥಿತಿ ನಿರ್ವಹಣೆ ಕಲಿಸಲು ಹಾಗೂ ಯೋಗದ ಮಹತ್ವ ತಿಳಿಸಲು ಎಂಟನೇ ತರಗತಿಯಿಂದ ಕಾಲೇಜು ಹಂತದವರೆಗೆ ಯೋಗ ಶಿಕ್ಷಣ ಜಾರಿಗೆ ತರಲಾಗುವುದು, ಈ ಕುರಿತು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.