

೧ ಜೂನ್ ೩೩, ಚಿಕ್ಕೋಡಿ,
ಇಂದು ಚಿಕ್ಕೋಡಿ ನಗರದಲ್ಲಿ, ವಾಯುವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ನಿಮಿತ್ತ ಭಾರತೀಯ ಜನತಾ ಪಕ್ಷದ ಚಿಕ್ಕೋಡಿ ಜಿಲ್ಲಾ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್ ಕುಮಾರ್ ಸುರಾನಾ, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನಪರಿಷತ್ ಸದಸ್ಯರಾದ ಶ್ರೀ ಎನ್. ರವಿಕುಮಾರ್ ಜಿ, ರಾಜ್ಯ ಕಾರ್ಯದರ್ಶಿಗಳಾದ ಸೌ. ಉಜ್ವಲಾ ಬಡವಣಾಚೆ, ಬೆಳಗಾವಿ ವಿಭಾಗದ ಪ್ರಭಾರಿಗಳಾದ ಶ್ರೀ ಚಂದ್ರಶೇಖರ್ ಕವಟಗಿ, ಸ್ಥಳೀಯ ಮುಖಂಡರು, ಪದಾಧಿಕಾರಿಗಳು ಹಾಜರಿದ್ದರು.
