

ದಾವಣಗೆರೆ: ರಾಜಸ್ತಾನದ ಉದಯಪುರದಲ್ಲಿ ಟೈಲರ್ ಕೊಂದು ಹಾಕಿದ ಹಂತಕರನ್ನು ಗುಂಡಿಟ್ಟಿ ಕೊಲ್ಲಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ.
ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆಯು ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜಸ್ತಾನದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಹಂತಕರಿಗೆ ಗಲ್ಲು ಶಿಕ್ಷೆ ಅಥವಾ ಗುಂಡಿಟ್ಟು ಕೊಲ್ಲಬೇಕು. ಇಲ್ಲದಿದ್ದರೆ ದೇಶದಲ್ಲಿ ಹಿಂದೂಗಳ ಶಕ್ತಿ ಏನೆಂಬುದನ್ನು ತೋರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಹಂತಕರಿಗೆ ಶಿಕ್ಷೆ ಕೊಡುವ ಮೂಲಕ ಹತ್ಯೆಗೀಡಾದ ಕನ್ನಯ್ಯಲಾಲ್ ಆತ್ಮಕ್ಕೆ ಶಾಂತಿ ಕೋರಬೇಕಿದೆ. ರಾಜಸ್ತಾನ ಸರ್ಕಾರ ಕ್ರಮ ಕೈಗೊಳ್ಳದೇ ಹೋದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ಒತ್ತಾಯ ಮಾಡಲಿದೆ. ಅಮಾನುಷ ಕೃತ್ಯ ಮಾಡಿದ ಕಟುಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಇಲ್ಲವೇ ಗುಂಡು ಹೊಡೆದು ಹಂತಕರ ಕಥೆ ಮುಗಿಸಬೇಕು ಎಂದು ಒತ್ತಾಯ ಮಾಡುತ್ತೇವೆ ಎಂದರು.