ಕರ್ನಾಟಕದಲ್ಲಿ ಪೆಟ್ಟು ತಿಂದ ಬಳಿಕ ಬಿಜೆಪಿ ಪ್ಲಾನ್ ಏನು ..? ಪಂಚರಾಜ್ಯ ಚುನಾವಣೆಗೆ ಪ್ಲಾನ್ ಏನಿದೆ ಗೊತ್ತಾ..

ದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಡವಾಗಿ ಟಿಕೆಟ್ ಘೋಷಣೆ ಮಾಡಿ ಪೆಟ್ಟು ತಿಂದಿದ್ದ ಬಿಜೆಪಿ ಇದೀಗ ಎಚ್ಚೆತ್ತುಕೊಂಡಿದು ಈ ವರ್ಷಾಂತ್ಯದಲ್ಲಿ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಹಿನ್ನಲೆ ಚುನಾವಣೆ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡುವ ಮುನ್ನವೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ..

ಛತ್ತಿಸ್ ಗಢ, ಮಧ್ಯ ಪ್ರದೇಶದಲ್ಲಿ ಅಭ್ಯರ್ಥಿಗಳ ಘೋಷಣೆ..!

ಈ ವರ್ಷದ ಅತ್ಯದಲ್ಲಿ ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ, ಬಳಿಕ ಲೋಕಸಭೆ ಚುನಾವಣೆ ಇರುವುದರಿಂದ ಪಂಚರಾಜ್ಯಗಳ ಚುನಾವಣೆ ಸೆಮಿ ಫೈನಲ್ ಎಂದೇ ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ,

ಕರ್ನಾಟಕದಲ್ಲಿ ಪೆಟ್ಟು ತಿಂದಿರುವ ಬಿಜೆಪಿ ತಂತ್ರಗಾರಿಕೆ ರೂಪಿಸಿದೆ ಎನ್ನಲಾಗಿದೆ, ಹೀಗಾಗಿ ಭಾರತೀಯ ಚುನಾವಣಾ ಆಯೋಗವು ಚುನಾವಣಾ ದಿನಾಂಕಗಳನ್ನು ಪ್ರಕಟಿಸುವ ಮೊದಲೇ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿರುವುದು ಇದೇ ಮೊದಲಾಗಿದೆ, 90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಗೆ 21 ಮತ್ತು 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ 39 ಅಭ್ಯರ್ಥಿಗಳನ್ನು ಪಕ್ಷ ಘೋಷಣೆ ಮಾಡಿ ಎದುರಾಳಿ ಪಕ್ಷಗಳಿಗೆ ನಡುಕ ಉಂಟು ಮಾಡಿದೆ

ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಮಿತಿ, ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಕಾರ್ಯತಂತ್ರಗಳ ತಯಾರಿಗಾಗಿ ಪಕ್ಷದ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯ ಸಭೆಯ ನಂತರ ಈ ಘೋಷಣೆ ಮಾಡಲಾಗಿದೆ ಎನ್ನಲಾಗಿದೆ ಇನ್ನೂ
ಬಂಡಾಯ ಅಭ್ಯರ್ಥಿಗಳ ಸಮಸ್ಯೆಗಳನ್ನು ಮುಂಚಿತವಾಗಿ ಪರಿಹರಿಸಬಹುದಾದ ಕಾರಣಕ್ಕೆ ಅಭ್ಯರ್ಥಿಗಳ ಹೆಸರನ್ನು ಮೊದಲೇ ಘೋಷಿಸುವ ನಿರ್ಧಾರಕ್ಕೆ ಬಿಜೆಪಿ ನಾಯಕತ್ವ ಮುಂದಾಗಿದೆ ಎಂದು ಹೇಳಲಾಗುತ್ತಿದೆ

  • Related Posts

    ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕನಸುಬಿಜೆಪಿ ಟಿಕೇಟ್ ಪ್ರಬಲ ಆಕಾಂಕ್ಷಿ: ಕೆ.ಬಿ.ಕೊಟ್ರೇಶ್,,,

    ದಾವಣಗೆರೆ.ಸೆ.25: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಸುವ ಮೂಲಕ ಜಿಲ್ಲೆಯನ್ನು ಮಾದರಿಯಾಗಿ ಮಾಡುವ ಕನಸು ಕಟ್ಟಿರುವುದಾಗಿ ಬಿಜೆಪಿ ಟಿಕೇಟ್ ಆಕಾಂಕ್ಷಿ ಕೆ.ಬಿ.ಕೊಟ್ರೇಶ್ ಹೇಳಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರುವ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ತಾವೂ ಕೂಡ ಬಿಜೆಪಿ ಟಿಕೇಟ್‌ಗೆ…

    ಹಿಂದಿ ಎಂದಿಗೂ ಯಾವುದೇ ಭಾರತೀಯ ಭಾಷೆಯೊಂದಿಗೆ ಸ್ಪರ್ಧಿಸಿಲ್ಲ, ಮುಂದೆಯೂ ಸ್ಪರ್ಧಿಸುವುದಿಲ್ಲ: ಅಮಿತ್ ಶಾ

    ಹಿಂದಿ ದಿವಸ್‌ ನಿಮಿತ್ತ, ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭಾಷಾ ವೈವಿಧ್ಯತೆಗೆ ಹೆಸರುವಾಸಿಯಾದ ರಾಷ್ಟ್ರದಲ್ಲಿ ಹಿಂದಿಯ ಏಕೀಕರಣದ ಪಾತ್ರವನ್ನು ಎತ್ತಿ ತೋರಿಸಿದರು. ನಾಗರಿಕರಿಗೆ ನೀಡಿದ ಸಂದೇಶದಲ್ಲಿ, ಹಿಂದಿ ಯಾವುದೇ ಭಾರತೀಯ ಭಾಷೆಯೊಂದಿಗೆ ಸ್ಪರ್ಧಿಸುವುದಿಲ್ಲ ಮತ್ತು…

    Leave a Reply

    Your email address will not be published. Required fields are marked *

    error: Content is protected !!