

ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಆಗಸ್ಟ್ 24ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಕೆಲವು ಕಡೆ ಗುಡುಗು ಸಹಿತ ಭಾರಿ ಮಳೆಯ ಸದತಿ ಇದೆ ಎಂದು ತಿಳಿದಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ,ಉತ್ತರ ಕನ್ನಡ, ದಕ್ಷಿಣ ಕನ್ನಡ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಳಗಾವಿ, ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು,ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ .

ಬೆಂಗಳೂರಿನ ಹಲವೆಡೆ ಇಂದು ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.

ತೆಲಂಗಾಣದಲ್ಲಿ ಮುಂದಿನ 3-4 ದಿನಗಳ ಕಾಲ ಭಾರಿ ಮಳೆಯಾಗಲಿದೆ ಮಹಾರಾಷ್ಟ್ರದಲ್ಲೂ ಮಳೆಯಾಗಲಿದೆ ಎಂದು ಅವಮಾನ ಇಲಾಖೆ ತಿಳಿಸಿದೆ….